ADVERTISEMENT

ಸಿಎಜಿ ಕೇವಲ ಲೆಕ್ಕ ಪರಿಶೋಧಕರಲ್ಲ - ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಅವ್ಯವಹಾರ ಕುರಿತು ಲೆಕ್ಕ ಪರಿಶೋಧನೆ ನಡೆಸುವ ಮಹಾಲೇಖಪಾಲರ (ಸಿಎಜಿ)ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತಳ್ಳಿಹಾಕಿದ ಸುಪ್ರೀಂಕೋರ್ಟ್ , `ಸಿಎಜಿ ಅವರು ಸಾಂವಿಧಾನಿಕ ಅಧಿಕಾರ ಹೊಂದಿದವರೇ ಹೊರತೂ ಅವರೊಬ್ಬ ಲೆಕ್ಕ ಪರಿಶೋಧಕ~ ಅಲ್ಲ ಎಂದು ಸ್ಪಷ್ಟಪಡಿಸಿತು.

`ಸಿಎಜಿ ಅವರು ಕೇವಲ ಲೆಕ್ಕ ಪರಿಶೋಧಕರಲ್ಲ, ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಆದಾಯ ಹಂಚಿಕೆ ಕುರಿತು ಪರಿಶೀಲನೆ ನಡೆಸುವ ಸಾಂವಿಧಾನಿಕ ಅಧಿಕಾರ ಹೊಂದಿದವರಾಗಿದ್ದಾರೆ~ ಎಂದು ನ್ಯಾಯಮೂರ್ತಿಗಳಾದ ಆರ್. ಎಂ. ಲೋಧಾ ಮತ್ತು ಎ. ಆರ್. ದವೆ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ.

ಸಿಎಜಿ ವರದಿಯನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರವನ್ನು ಸಂಸತ್ತು ಮಾತ್ರ ಹೊಂದಿದೆ ಎಂದೂ ಪೀಠ ಇದೇ ಸಂದರ್ಭದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.