ADVERTISEMENT

ಸಿಎನ್‌ಆರ್‌ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:35 IST
Last Updated 18 ಡಿಸೆಂಬರ್ 2013, 19:35 IST

ನವದೆಹಲಿ (ಪಿಟಿಐ): ಕನ್ನಡದ ಖ್ಯಾತ ವಿಮರ್ಶಕ ಡಾ. ಸಿ.ಎನ್‌. ರಾಮ­­ಚಂದ್ರನ್‌ ಅವರ ‘ಆಖ್ಯಾನ–ವ್ಯಾಖ್ಯಾನ’ ವಿಮರ್ಶಾ ಕೃತಿ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಹಿಂದಿ ಸಿನಿಮಾ ಗೀತ ರಚನೆಕಾರ ಜಾವೇದ್‌ ಅಖ್ತರ್‌, ಹಿಂದಿ ಕಾದಂಬರಿ­ಕಾರ್ತಿ ಮೃದುಲಾ ಗರ್ಗ್‌ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಸೇರಿದ್ದಾರೆ. ಮಾರ್ಚ್‌ 11ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ ಕೆ. ಶ್ರೀನಿವಾಸರಾವ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT