ನವದೆಹಲಿ (ಪಿಟಿಐ): 1984ರ ಸಿಖ್ ವಿರೋಧಿ ದಂಗೆಗಳ ಪ್ರಕರಣದಲ್ಲಿ ಕಾಂಗ್ರೆಸ್ ಧುರೀಣ ಸಜ್ಜನ್ ಕುಮಾರ್ ಅವರನ್ನು ಖುಲಾಸೆ ಮಾಡಿ ನಗರದ ನ್ಯಾಯಾಲಯವೊಂದು ನೀಡಿದ ತೀರ್ಪನ್ನು ದೆಹಲಿ ಹೈಕೋರ್ಟಿನಲ್ಲಿ ಸಿಬಿಐ ಪ್ರಶ್ನಿಸಲಿದೆ.
ತನ್ನ ಅರ್ಜಿಯಲ್ಲಿ ಸಜ್ಜನ್ ಕುಮಾರ್ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ 'ಪ್ರಬಲವಾದ' ಆಧಾರಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅವುಗಳನ್ನು ಆಧರಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಪ್ರಕಟಿಸುವವರೆಗೆ ಸಿಬಿಐ ಕಾಯುವ ಸಾಧ್ಯತೆಗಳಿವೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.