ADVERTISEMENT

ಸಿಪಿಎಂ- ಕಾಂಗ್ರೆಸ್ ಘರ್ಷಣೆ: ಸಾವು

​ಪ್ರಜಾವಾಣಿ ವಾರ್ತೆ
Published 14 ಜುಲೈ 2013, 19:59 IST
Last Updated 14 ಜುಲೈ 2013, 19:59 IST

ಮುರ್ಷಿದಾಬಾದ್, ಪಶ್ಚಿಮ ಬಂಗಾಳ (ಪಿಟಿಐ): ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿನ ಕೋಶಾಬೇರಿಯಾ ಗ್ರಾಮದಲ್ಲಿ ಸಿಪಿಎಂ ಮತ್ತು ಕಾಂಗ್ರೆಸ್ ಮಧ್ಯೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಸಿಪಿಎಂ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ಘಟನೆ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.