ADVERTISEMENT

ಸಿಬಿಎಸ್‌ಇ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ದೋಷ: 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ

ಏಜೆನ್ಸೀಸ್
Published 19 ಏಪ್ರಿಲ್ 2018, 19:30 IST
Last Updated 19 ಏಪ್ರಿಲ್ 2018, 19:30 IST
ಸಿಬಿಎಸ್‌ಇ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ದೋಷ: 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ
ಸಿಬಿಎಸ್‌ಇ ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ದೋಷ: 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ   

ನವದೆಹಲಿ: ಇಂಗ್ಲಿಷ್‌ ಪ್ರಶ್ನೆಪತ್ರಿಕೆಯಲ್ಲಿ ಉಂಟಾಗಿದ್ದ ಮುದ್ರಣ ದೋಷದ ಕಾರಣದಿಂದಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಪರಿಹಾರ ನೀಡಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ನಿರ್ಧರಿಸಿದೆ.

ಇಂಗ್ಲಿಷ್‌ ಪರೀಕ್ಷೆ ಮಾರ್ಚ್‌ 12ರಂದು ನಡೆದಿತ್ತು. ಪ್ರಶ್ನೆ ಪತ್ರಿಕೆಯ ಗದ್ಯ ಓದಿ ಉತ್ತರಿಸಿ (Comprehension Passage) ವಿಭಾಗದ ಕೆಲವು ಪ್ರಶ್ನೆಗಳಲ್ಲಿ ದೋಷಗಳಿದ್ದವು. ಇದಕ್ಕೆ ಸಂಬಂಧಿಸಿದಂತೆ ಕೃಪಾಂಕ ನೀಡಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಡಳಿಗೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರಶ್ನೆಪತ್ರಿಕೆಯಲ್ಲಿನ ಗದ್ಯ ಓದಿ ಸಹಿಷ್ಣುತೆ, ಅಡಚಣೆ ಮತ್ತು ಪ್ರೇರಣೆ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯುವಂತೆ ಸೂಚಿಸಲಾಗಿತ್ತು. ಆದರೆ, ಪ್ರಶ್ನೆಗಳ ಅನುಕ್ರಮಣಿಕೆಯಲ್ಲಿ ದೋಷ ಉಂಟಾಗಿದೆ ಎಂದು ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ADVERTISEMENT

‘ಪ್ರಶ್ನೆಪತ್ರಿಕೆಯಲ್ಲಿನ ಮುದ್ರಣ ದೋಷ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದು ಎಂಬುದು ಮಂಡಳಿಯ ಉದ್ದೇಶ. ಹಾಗಾಗಿ ತಪ್ಪಾಗಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಬರೆದಿರುವ ವಿದ್ಯಾರ್ಥಿಗಳಿಗೆ 2 ಅಂಕಗಳ ಪರಿಹಾರ ನೀಡಲು ನಿರ್ಧರಿಸಲಾಗಿದೆ’ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಬಿಎಸ್‌ಇಯ 10, 12ನೇ ತರಗತಿ ಪರೀಕ್ಷೆಗಳು ಮಾರ್ಚ್‌ 5 ರಿಂದ ಏಪ್ರಿಲ್‌ 25ರ ವರೆಗೆ ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.