ADVERTISEMENT

ಸಿಬಿಎಸ್ಇ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಐ ತನಿಖೆಗೆ ಒಪ್ಪಿಸಲು ವಿದ್ಯಾರ್ಥಿಗಳ ಒತ್ತಾಯ

ಏಜೆನ್ಸೀಸ್
Published 31 ಮಾರ್ಚ್ 2018, 13:15 IST
Last Updated 31 ಮಾರ್ಚ್ 2018, 13:15 IST
ಸಿಬಿಎಸ್ಇ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಐ ತನಿಖೆಗೆ ಒಪ್ಪಿಸಲು ವಿದ್ಯಾರ್ಥಿಗಳ ಒತ್ತಾಯ
ಸಿಬಿಎಸ್ಇ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಐ ತನಿಖೆಗೆ ಒಪ್ಪಿಸಲು ವಿದ್ಯಾರ್ಥಿಗಳ ಒತ್ತಾಯ   

ನವದೆಹಲಿ:  ಸಿಬಿಎಸ್ಇ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಸೇರಿದಂತೆ ನಾನಾ ರಾಜ್ಯ ವಿದ್ಯಾರ್ಥಿಗಳು ಸಂಸತ್ತಿನ ಎದುರು ಪ್ರತಿಭಟನೆ ಕೈಗೊಂಡಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. 

ಈ ಮಧ್ಯೆ ಮೇಲಾಧಿಕಾರಿಗಳ ಸಂಧಾನಕ್ಕೂ ತಮ್ಮ ನಿಲುವನ್ನು ಸಡಿಲಿಸದ ವಿದ್ಯಾರ್ಥಿಗಳು  ಸರ್ಕಾರ ತನಿಖೆಯ ಕುರಿತಾಗಿ ಲಿಖಿತ ಆದೇಶ ಹೊರಡಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ADVERTISEMENT

ದೆಹಲಿಯ ಜಂತರ್‌ ಮಂತರ್‌ನಲ್ಲಿಯೂ ಪ್ರತಿಭಟನೆ ಕೈಗೊಂಡಿರುವ ವಿದ್ಯಾರ್ಥಿಗಳು, 'ಸರ್ಕಾರ ಕೇವಲ ಪೊಳ್ಳು ಭರವಸೆ ನೀಡುತ್ತಿದೆ. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.