ನವದೆಹಲಿ (ಪಿಟಿಐ): ಕಾಮನ್‌ವೆಲ್ತ್ ಕ್ರೀಡಾಕೂಟ ಸಂಘಟನಾ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದರು. ಈ ಹಿನ್ನೆಲೆಯಲ್ಲಿ ಅಂತಿಮ ಕಾನೂನು ಕ್ರಮಗಳ ಸಾಧ್ಯತೆ ಇದೆ.ಕಾಮನ್‌ವೆಲ್ತ್ ಕ್ರೀಡಾಕೂಟದ ಹಣ ದುರುಪಯೋಗ ಆರೋಪ ಹೊತ್ತಿರುವ ಕಲ್ಮಾಡಿ ಅವರನ್ನು ಈ ಮುನ್ನ ಜನವರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.