ADVERTISEMENT

ಸಿಬಿಐ ತನಿಖೆಗೆ ಅಣ್ಣಾ ಆಗ್ರಹ

ಪಿಟಿಐ
Published 4 ಮಾರ್ಚ್ 2018, 19:30 IST
Last Updated 4 ಮಾರ್ಚ್ 2018, 19:30 IST
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.   

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಒತ್ತಾಯಿಸಿದ್ದಾರೆ.

ಆಯೋಗದ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಹಜಾರೆ, ‘ನಿಮ್ಮ ಪ್ರತಿಭಟನೆ ನ್ಯಾಯಸಮ್ಮತ ಆದರೆ, ಅದನ್ನು ಶಾಂತಿಯುತವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇದು ಭ್ರಷ್ಟಾಚಾರದ ಪ್ರಕರಣ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಹಜಾರೆ ಅವರು ಹೇಳಿದರು.

ADVERTISEMENT

ಸಿಬಿಐ ತನಿಖೆಗೆ ಶಿಫಾರಸು
ನವದೆಹಲಿ:
ಕಂಬೈನ್ಡ್‌ ಗ್ರಾಜ್ಯುಯೇಟ್‌ ಲೇವಲ್‌ಗೆ (ಸಿಜಿಎಲ್‌) ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಶಿಫಾರಸು ಮಾಡಲು ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ನಿರ್ಧರಿಸಿದೆ.

ಬಿಜೆಪಿಯ ದೆಹಲಿ ಸಂಸದ ಮನೋಜ್‌ ತಿವಾರಿ ಅವರ ನೇತೃತ್ವದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಗೃಹ ಸಚಿವ ರಾಜನಾಥ್‌ ಸಿಂಗ್‌ ಮತ್ತು ಎಸ್‌ಎಸ್‌ಸಿ ಅಧ್ಯಕ್ಷ ಅಶೀಂ ಖುರಾನಾ ಅವರನ್ನು ಭೇಟಿಯಾಗಿ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.