ADVERTISEMENT

ಸಿಬಿಐ ತನಿಖೆಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:30 IST
Last Updated 22 ಫೆಬ್ರುವರಿ 2012, 19:30 IST

ಲಖನೌ (ಪಿಟಿಐ): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿಧಂತೆ ಉತ್ತರ ಪ್ರದೇಶದ ಪ್ರಭಾವಿ ಸಚಿವ ನಸೀಮುದ್ದೀನ್ ಸಿದ್ದಿಕಿ ಮತ್ತು ಅವರ ಪತ್ನಿ  ವಿಧಾನ ಪರಿಷತ್ ಸದಸ್ಯೆ ಹುಸ್ನಾ ವಿರುದ್ಧ ಸಿಬಿಐ ತನಿಖೆಗೆ ಉತ್ತರ ಪ್ರದೇಶ ಲೋಕಾಯುಕ್ತರು ಶಿಫಾರಸು ಮಾಡಿದ್ದಾರೆ.

ಲೋಕಾಯುಕ್ತರ ಈ ನಿರ್ಧಾರವು ಮಾಯಾವತಿ ನೇತೃತ್ವದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

`ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿದ್ದಿಕಿ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐನ ಘಟಕವಾಗಿರುವ ಜಾರಿ ನಿರ್ದೇಶನಾಲಯದ ತನಿಖೆಗೆ ಶಿಫಾರಸು ಮಾಡಲಾಗಿದೆ~ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಕೆ. ಮೆಹ್ರೋತ್ರಾ ತಿಳಿಸಿದ್ದಾರೆ.

ADVERTISEMENT

ಸಿದ್ದಿಕಿ ದಂಪತಿ ವಿರುದ್ಧ ಜಗದೀಶ್ ನರೇನ್ ಶುಕ್ಲಾ ಎಂಬುವವರು ದೂರು ನೀಡಿದ್ದರು. ಸಿದ್ದಿಕಿ ದಂಪತಿ ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.