ADVERTISEMENT

ಸೀಮಾ ಮನವಿ ತಳ್ಳಿಹಾಕಿದ ಕೋರ್ಟ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2012, 19:30 IST
Last Updated 23 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): `ಫ್ಯಾಷನ್~ ಸಿನಿಮಾದ ಚಿತ್ರಕಥೆಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಬೇಕೆಂದು ಕೋರಿದ್ದ ನಟಿ ಹಾಗೂ ಲೇಖಕಿ ಸೀಮಾ ಸೇಥಿ ಅವರ ಮನವಿಯನ್ನು ದೆಹಲಿ ನ್ಯಾಯಾಲಯ ತಳ್ಳಿಹಾಕಿದೆ.

 ತಮ್ಮ ಪುಸ್ತಕವೊಂದರಿಂದ ಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್ ಅವರು ಕಥಾ ಹಂದರವನ್ನು ಕದ್ದು `ಫ್ಯಾಷನ್~ ಚಿತ್ರ ನಿರ್ಮಿಸಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸೀಮಾ ಸೇಥಿ ಮೊಕದ್ದಮೆ ದಾಖಲಿಸಿದ್ದಾರೆ.

ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಧೀಶರು ಸೀಮಾಗೆ ಸೂಚಿಸಿದರು.  ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಯಿತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.