ADVERTISEMENT

ಸುಖ್‌ರಾಂಗೆ ಮಧ್ಯಂತರ ಜಾಮೀನು ಮಂಜೂರು

​ಪ್ರಜಾವಾಣಿ ವಾರ್ತೆ
Published 9 ಜನವರಿ 2012, 19:30 IST
Last Updated 9 ಜನವರಿ 2012, 19:30 IST

ನವದೆಹಲಿ (ಪಿಟಿಐ): ಮೂರು ವರ್ಷಗಳ ಸೆರೆವಾಸ ಶಿಕ್ಷೆಗೆ ಗುರಿಯಾದ ಮಾಜಿ ಸಚಿವ ಸುಖ್‌ರಾಂ ಮತ್ತು ಇದೇ ಪ್ರಕರಣದ ಇನ್ನಿಬ್ಬರು ಸಹಅಪರಾಧಿಗಳಿಗೆ  ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 1993ರ ಟೆಲಿಕಾಂ ಹಗರಣ ಕುರಿತಂತೆ ಈ ಮೂವರಿಗೆ ಅಧೀನ ನ್ಯಾಯಾಲಯವು ಸಜೆ ವಿಧಿಸಿತ್ತು.

ಎರಡು ವರ್ಷಗಳ ಸೆರೆವಾಸ ವಿಧಿಸಲಾಗಿರುವ ಮಾಜಿ ಅಧಿಕಾರಿ ರುನು ಘೋಷ್ ಮತ್ತು ಮೂವರು ವರ್ಷಗಳ ಶಿಕ್ಷೆಗೆ ಗುರಿಯಾದ ಹೈದರಾಬಾದ್ ಮೂಲದ ಉದ್ಯಮಿ ಪಿ. ರಾಮರಾವ್ ಅವರಿಗೂ ಇದೇ 16ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.