ADVERTISEMENT

ಸುಗ್ರೀವಾಜ್ಞೆಗೆ ಸರ್ಕಾರ ಸಿದ್ಧ?

ಪಿಟಿಐ
Published 13 ಏಪ್ರಿಲ್ 2018, 18:59 IST
Last Updated 13 ಏಪ್ರಿಲ್ 2018, 18:59 IST

ನವದೆಹಲಿ: ‍ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಎಸ್‌ಸಿ, ಎಸ್‌ಟಿ ಕಾಯ್ದೆ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿಯೇ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಅಗತ್ಯಬಿದ್ದರೆ ಅದಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಲೂ ಸಿದ್ಧ ಎಂದು ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪು ಕಾಯ್ದೆಯನ್ನು ದುರ್ಬಲಗೊಳಿಸಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪಿನ ವಿರುದ್ಧ ವ್ಯಾಪಕವಾದ ಪ್ರತಿಭಟನೆ ಕೂಡ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT