ADVERTISEMENT

ಸುಧಾರಣೆ ಕಾಣದ ಕ್ಯಾ.ಲಕ್ಷ್ಮಿ ಆರೋಗ್ಯ

​ಪ್ರಜಾವಾಣಿ ವಾರ್ತೆ
Published 20 ಜುಲೈ 2012, 19:30 IST
Last Updated 20 ಜುಲೈ 2012, 19:30 IST

ಕಾನ್ಪುರ (ಪಿಟಿಐ): ಸುಭಾಷ್ ಚಂದ್ರ ಬೋಸ್ ಅವರ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ)ಯ ಝಾನ್ಸಿ ರಾಣಿ ಲಕ್ಷ್ಮಿ ಬಾಯಿ ದಂಡಿನ ಕಮಾಂಡರ್ ಆಗಿದ್ದ ಕ್ಯಾಪ್ಟ್‌ನ್ ಲಕ್ಷ್ಮಿ ಸೆಹಗಲ್ ಆರೋಗ್ಯ ಸ್ಥಿತಿ ಕಳವಳ ಕಾರಿಯಾಗಿದೆ. 

  ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಸೆಹಗಲ್ ಅವರನ್ನು ಗುರುವಾರ ಬೆಳಿಗ್ಗೆ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ ಎಂದು ಕುಟುಂಬ ಮೂಲಗಳು ಶುಕ್ರವಾರ ಮಾಹಿತಿ ನೀಡಿವೆ.

ಸೆಹಗಲ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆಗಳು ಕಂಡು ಬಂದಿಲ್ಲ ಎಂದು ಸೆಹಗಲ್ ಅವರ ಪುತ್ರಿ ಸುಭಾಷಿಣಿ ಅಲಿ ತಿಳಿಸಿದ್ದಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಗುರುವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.