ADVERTISEMENT

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್‌ಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 5 ಜೂನ್ 2018, 12:40 IST
Last Updated 5 ಜೂನ್ 2018, 12:40 IST
ಸುನಂದಾ- ಶಶಿ ತರೂರ್
ಸುನಂದಾ- ಶಶಿ ತರೂರ್   

ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ವಿಚಾರಣೆಗೊಳಪಡಿಸಲು ನ್ಯಾಯಾಲಯ ಸಮನ್ಸ್ ಕಳುಹಿಸಿದೆ. ಜೂನ್ ತಿಂಗಳು 7ರಂದು ವಿಚಾರಣೆಗೆ ಹಾಜರಾಗಬೇಕೆಂದು ದೆಹಲಿ ನ್ಯಾಯಾಲಯ ಆದೇಶಿಸಿದೆ.

ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಅವರು ತಮ್ಮ ಹೆಂಡತಿ ಸುನಂದಾ ಪುಷ್ಕರ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಸುನಂದಾ ಸಾವಿನ ಪ್ರಕರಣದಲ್ಲಿ ತರೂರ್‌ ಅವರೊಬ್ಬರೇ ಆರೋಪಿಯಾಗಿದ್ದಾರೆ.

ತರೂರ್‌ ಅವರು ತಮ್ಮ ಹೆಂಡತಿಯನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದರು. ತರೂರ್‌ ಅವರನ್ನು ಆರೋಪಿಯಾಗಿ ಕರೆಸಿ ವಿಚಾರಣೆಗೆ ಒಳಪಡಿಸಬೇಕು ಎಂದೂ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಆರೋಪಪಟ್ಟಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪುಟಗಳಿವೆ.

ADVERTISEMENT

ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 2014ರ ಜನವರಿ 17ರಂದು ಸುನಂದಾ ಮೃತಪಟ್ಟಿದ್ದರು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 498 ಎ (ಗಂಡ ಅಥವಾ ಆತನ ಸಂಬಂಧಿಕರು ಮಹಿಳೆಯನ್ನು ಕ್ರೂರವಾಗಿ ನಡೆಸಿಕೊಳ್ಳುವುದು) ಮತ್ತು 306 (ಆತ್ಮಹತ್ಯೆಗೆ ಕುಮ್ಮಕ್ಕು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ತರೂರ್‌ ಅವರನ್ನು ಮದುವೆಯಾಗಿ ಮೂರು ವರ್ಷ ಮೂರು ತಿಂಗಳಲ್ಲಿ ಸುನಂದಾ ಅವರು ಮೃತಪಟ್ಟಿದ್ದಾರೆ. 2010ರ ಆಗಸ್ಟ್‌ 22ರಂದು ಅವರ ಮದುವೆ ನಡೆದಿತ್ತು.

ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿದೆ. ತರೂರ್‌ ಅವರನ್ನು ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕಾದ ಅಗತ್ಯ ಇದೆ ಎಂಬುದು ಇದರಿಂದ ಕಂಡು ಬಂದಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ತರೂರ್‌ ಅವರನ್ನು ಈವರೆಗೆ ಬಂಧಿಸಲಾಗಿಲ್ಲ. ತನಿಖೆಗೆ ಅಗತ್ಯ ಇದ್ದಾಗಲೆಲ್ಲ ಅವರು ಹಾಜರಾಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.