ADVERTISEMENT

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್ ವಿರುದ್ಧ ಆರೋಪ ಪಟ್ಟಿ

​ಪ್ರಜಾವಾಣಿ ವಾರ್ತೆ
Published 14 ಮೇ 2018, 13:49 IST
Last Updated 14 ಮೇ 2018, 13:49 IST
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್ ವಿರುದ್ಧ ಆರೋಪ ಪಟ್ಟಿ
ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್ ವಿರುದ್ಧ ಆರೋಪ ಪಟ್ಟಿ   

ನವದೆಹಲಿ: ನಾಲ್ಕು ವರ್ಷಗಳ ಹಿಂದಿನ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಆತ್ಮಹತ್ಯೆ ಎಂದು ಪರಿಗಣಿಸಿದ್ದು, ಸುನಂದಾ ಪತಿ ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಶಶಿ ತರೂರ್ ವಿರುದ್ದ  ಸೆಕ್ಷನ್‌ 306, 498ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2014 ಜನವರಿ 17ರಂದು ಸುನಂದಾ ಪುಷ್ಕರ್‌ ಅವರ ಮೃತದೇಹವು ದೆಹಲಿಯ ಪಂಚತಾರಾ ಹೋಟೆಲೊಂದರ ಕೊಠಡಿಯಲ್ಲಿ ಪತ್ತೆಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.