ADVERTISEMENT

ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರ ಹಾಗೂ ಚೆಲಮೇಶ್ವರ್ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ, ಸುಪ್ರೀಂಕೋರ್ಟ್‌ನ  ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ  ಪ್ರಮಾಣವಚನ ಬೋಧಿಸಿದರು.
ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ದೆಹಲಿ ಹೈಕೋರ್ಟ್ ಮತ್ತು ಚೆಲಮೇಶ್ವರ್ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.