ADVERTISEMENT

ಸುಪ್ರೀಂ ಕೋರ್ಟಿಗೆ ಇನ್ನೂ ಇಬ್ಬರು ನ್ಯಾಯಮೂರ್ತಿಗಳು

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2011, 19:30 IST
Last Updated 2 ಅಕ್ಟೋಬರ್ 2011, 19:30 IST

ನವದೆಹಲಿ: ದೆಹಲಿ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಚೆಲ್ಮೇಶ್ವರ್ ಅವರನ್ನು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಈ ನೇಮಕ ಮಾಡಿದ್ದಾರೆ. ಇಬ್ಬರೂ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟಿನಲ್ಲಿ ಏಳು ವರ್ಷ ಸೇವೆ ಸಲ್ಲಿಸಲಿದ್ದಾರೆ.

ಸಿ.ಎಂ. ಕಾರು ಚಾಲಕನ ಅಮಾನತು
ಪ್ರಜಾವಾಣಿ ವಾರ್ತೆ
ನವದೆಹಲಿ:
ಕರ್ತವ್ಯದ ಮೇಲಿದ್ದ ಸಂದರ್ಭದಲ್ಲಿ ಮದ್ಯ ಸೇವನೆಯ ಆರೋಪದ ಮೇಲೆ ಇಲ್ಲಿನ ಕರ್ನಾಟಕ ಭವನದ ಉದ್ಯೋಗಿ ಹಾಗೂ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಕಾರು ಚಾಲಕ ತ್ಯಾಗೇಶ್ ಮೂರ್ತಿ ಎಂಬಾತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತ್ಯಾಗೇಶ್ ಮೂರ್ತಿ ಕರ್ತವ್ಯದ ಮೇಲಿದ್ದ ಸಂದರ್ಭದಲ್ಲಿ ಮದ್ಯಪಾನ ಮಾಡಿರುವುದನ್ನು ಸ್ವತಃ ಮುಖ್ಯಮಂತ್ರಿ ಸದಾನಂದಗೌಡ ಅವರೇ ಗಮನಿಸಿ, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಭವನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ನಂತರ ಅಧಿಕಾರಿಗಳು ಆತನನ್ನು ಅಮಾನತುಗೊಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.