ADVERTISEMENT

ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಹ್ಯಾಕ್‌

ಏಜೆನ್ಸೀಸ್
Published 19 ಏಪ್ರಿಲ್ 2018, 10:06 IST
Last Updated 19 ಏಪ್ರಿಲ್ 2018, 10:06 IST
ವೆಬ್‌ಸೈಟ್‌ ಹ್ಯಾಕ್ ಮಾಡಿರುವುದು
ವೆಬ್‌ಸೈಟ್‌ ಹ್ಯಾಕ್ ಮಾಡಿರುವುದು   

ನವದೆಹಲಿ: ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಅನ್ನು ಗುರುವಾರ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸಿಬಿಐ ನ್ಯಾಯಾಧೀಶ ಬಿ.ಎಚ್‌.ಲೋಯ ಸಾವು ಸಹಜ ಕಾರಣದಿಂದ ಸಂಭವಿಸಿದೆ ಎಂದು ಸುಪ್ರೀಂ ಕೋರ್ಟ್‌, ಸಾವಿನ ಕುರಿತು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ, ಬೆನ್ನಲೇ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಅನ್ನು ಹ್ಯಾಕ್ ಮಾಡಲಾಗಿದೆ.

ಗುರುವಾರ ಮಧ್ಯಾಹ್ನ 12.10ರ ಸುಮಾರಿಗೆ ಹ್ಯಾಕ್‌ ಮಾಡಲಾಗಿದೆ. ಹ್ಯಾಕ್‌ ಮಾಡಿರುವ ಸ್ಕ್ರೀನ್‌ ಶಾಟ್‌ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ADVERTISEMENT

ಬ್ರೆಜಿಲ್‌ ದೇಶದಲ್ಲಿ ಹ್ಯಾಕ್‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹ್ಯಾಕ್ ಮಾಡಿದವರು ವೆಬ್‌ಸೈಟ್‌ನಲ್ಲಿ ಬ್ರೆಜಿಲ್‌ ದೇಶದ ಮರಿಜಿನಾ ಹೂವಿನ ಚಿತ್ರವನ್ನು ಪ್ರಕಟಿಸಿದ್ದಾರೆ ಹಾಗೂ ’ ಹೈಟೆಕ್‌ ಬ್ರೆಜಿಲ್‌ ಹ್ಯಾಕ್ ಟೀಂ’ ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ರಕ್ಷಣಾ ಇಲಾಖೆ ಸೇರಿದಂತೆ  ಇತರೆ ಸರ್ಕಾರಿ ಇಲಾಖೆಗಳ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.