ನವದೆಹಲಿ (ಐಎಎನ್‌ಎಸ್): ವಯಸ್ಕರ ನಡುವೆ ಸಮ್ಮತಿಯ ಸಲಿಂಗರತಿ ಅಪರಾಧ ಎಂದಿರುವ ಸುಪ್ರೀಂ ಕೋರ್ಟ್‌ನ ತೀರ್ಪು `ನಿರಾಶೆ' ಉಂಟುಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಹೇಳಿದರು.
`ಈ ಹಿಂದೆ ದೆಹಲಿ ಹೈಕೋರ್ಟ್ ಸಲಿಂಗಿಗಳ ಹಕ್ಕು ಕುರಿತಂತೆ ನೀಡಿದ್ದ ತೀರ್ಪಿಗೆ ವಿರುದ್ಧವಾಗಿರುವ ಸುಪ್ರಿಂ ಕೋರ್ಟ್‌ನ ಈ ತೀರ್ಪಿನಿಂದ ನನಗೆ ಆಶಾಭಂಗವಾಗಿದೆ'ಎಂದು ಅವರು ತಿಳಿಸಿದರು.
ಇದೇ ವೇಳೆ ಅವರು ಸಲಿಂಗರತಿ ಸೇರಿದಂತೆ ಎಲ್ಲ ನಾಗರೀಕರಿಗೆ ಇರುವ ಜೀವನ ಮತ್ತು ಸ್ವಾತಂತ್ರ್ಯದ ಸಾಂವಿಧಾನಿಕ ಭರವಸೆಯನ್ನು ಸಂಸತ್ತು ಎತ್ತಿಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೆಹಲಿ ಹೈಕೋರ್ಟ್ 2009ರಲ್ಲಿ ಸಮ್ಮತಿಯ ಸಲಿಂಗರತಿಯನ್ನು ಅಪರಾಧಮುಕ್ತಗೊಳಿಸಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎಸ್.ಜೆ.ಮುಖ್ಯೋಪಾಧ್ಯಾಯ ಅವರ ಪೀಠ ಗುರುವಾರ ವಜಾಗೊಳಿಸಿದೆ. ಇದು ಸಲಿಂಗಿ, ದ್ವಿಲಿಂಗಿ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಅತೃಪ್ತಿಗೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.