
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): 16ನೇ ಲೋಕಸಭೆಯ ಸ್ಪೀಕರ್ ಆಗಿ ಸಂಸದೆ ಸುಮಿತ್ರ ಮಹಾಜನ್ ಆಯ್ಕೆಯಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಗುರುವಾರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಿತ್ರಾ ಮಹಾಜನ್ ಸ್ಪೀಕರ್ ಆಗುವುದು ಬಹುತೇಕ ಖಚಿತ ಎಂದರು.
ಅನುಭವಿ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಸುಮಿತ್ರಾ ಮಹಾಜನ್ ಪಾತ್ರರಾಗಿದ್ದಾರೆ.
71 ವರ್ಷದ ಸುಮಿತ್ರಾ ಅವರು ಸತತ ಎಂಟು ಸಲ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಡಳಿತದಲ್ಲಿ ರಾಜ್ಯ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.
ಮೀರಾ ಕುಮಾರ್ ಬಳಿಕ ಸ್ಪೀಕರ್ ಸ್ಥಾನವನ್ನು ಅಲಂಕರಿಸುತ್ತಿರುವ 2ನೇ ಮಹಿಳೆ ಎನ್ನಿಸಿಕೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.