ADVERTISEMENT

ಸುಷ್ಮಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ವರ್ಶ

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 19:59 IST
Last Updated 22 ಜುಲೈ 2013, 19:59 IST

ನವದೆಹಲಿ(ಪಿಟಿಐ):  ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ದೆಹಲಿಯಿಂದ ಉಜ್ಜಯನಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಜೈಪುರ ನಿಲ್ದಾಣದಲ್ಲಿ ತುರ್ತು ಭೂ ಸ್ವರ್ಶ ಮಾಡಲಾಯಿತು.

ವಿಮಾನದ ಬಲ ಎಂಜಿನ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ಜೈಪುರದಲ್ಲಿ ಇಳಿಸಲಾಯಿತು ಎಂದು ಸುಷ್ಮಾ  ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಬದಲಿ ವಿಮಾನದಲ್ಲಿ ಇಂದೋರ್‌ಗೆ ತೆರಳಿದ ಸುಷ್ಮಾ ಅಲ್ಲಿಂದ ಉಜ್ಜಯನಿಗೆ ತೆರಳಿದರು.

  ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯುತ್ತಿದ್ದು, ವಿದಿಶಾದ ಸಂಸದರಾಗಿರುವ ಸುಷ್ಮಾ, ಚುನಾವಣಾ ಸಂಬಂಧಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.