ADVERTISEMENT

ಸೆಲ್ಫಿ ಅವಘಡ: ಮಾಹಿತಿಗೆ ಸೂಚನೆ

ಪಿಟಿಐ
Published 3 ಏಪ್ರಿಲ್ 2018, 19:30 IST
Last Updated 3 ಏಪ್ರಿಲ್ 2018, 19:30 IST

ನವದೆಹಲಿ : ಸೆಲ್ಫಿ ತೆಗೆದುಕೊಳ್ಳುವಾಗ ಪದೇ ಪದೇ ಅವಘಡ ಸಂಭವಿಸುತ್ತಿರುವ ಪ್ರೇಕ್ಷಣೀಯ ಸ್ಥಳಗಳ ವಿವರ ನೀಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

‘ಸೆಲ್ಫಿ ದುರ್ಘಟನೆಗಳು ಹೆಚ್ಚುತ್ತಿರುವ ಕಾರಣ ಇಂಥದ್ದೊಂದು ಸೂಚನೆಯನ್ನು ನೀಡಲಾಗಿದೆ’ ಎಂದು ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್‌ ಗಂಗಾರಾಮ್‌ ಅಹೀರ್‌ ಲೋಕಸಭೆಯಲ್ಲಿ ಹೇಳಿದರು. ‘ಇಂಥ ದುರ್ಘಟನೆ ಮರುಕಳಿಸದಂತೆ ಎಲ್ಲಾ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ’ಎಂದರು.

‘ಸೆಲ್ಫಿ ದುರ್ಘಟನೆಗಳ ಬಗ್ಗೆ ಕೇಂದ್ರಕ್ಕೆ ಆಗಿಂದಾಗ್ಗೆ ಮಾಹಿತಿ ನೀಡುತ್ತಿರಬೇಕು. ‘ಸೆಲ್ಫಿ ನಿಷೇಧ ಜಾಗ’ ಎಂಬ ಎಚ್ಚರಿಕೆ ಫಲಕದ ಜೊತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲು ಇಂಥ ಸ್ಥಳಗಳಲ್ಲಿ ಸಿಬ್ಬಂದಿ ನೇಮಕ ಮಾಡಬೇಕು. ಕಾರ್ಯಕ್ರಮಗಳ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ರಾಜ್ಯಗಳಿಗೆ ಸೂಚಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.