ಹೈದರಾಬಾದ್, (ಐಎಎನ್ಎಸ್): ತೆಲಂಗಾಣ ಪರ ವಕೀಲರ ಚಳುವಳಿ ಮೂಂದುವರೆದಿರುವುದರಿಂದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಹೊತ್ತು ಬಂಧಿತರಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರವೂ ನಡೆಯಲಿಲ್ಲ.
ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಕುರಿತು ವಿಚಾರಣೆ ನಡೆಸುತ್ತಿರುವ ಇಲ್ಲಿನ ಸಿಬಿಐನ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕಿತ್ತು. ತೆಲಂಗಾಣ ಪರ ವಕೀಲರ ಮುಷ್ಕರದ ಕಾರಣ ಕಲಾಪ ನಡೆಯದೇ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಸೆ 29ಕ್ಕೆ ಮುಂದೂಡಿತು.
ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಒಂದು ವಾರ ಕಾಲ ಮುಂದೂಡಿರುವುದರಿಂದ ಅಕ್ರಮ ಗಣಿಗಾರಿಕೆ ನಡೆಸಿದ್ದಕ್ಕಾಗಿ ಬಂಧಿತರಾಗಿ ಇಲ್ಲಿನ ಜೈಲಿನಲ್ಲಿರುವ ಕರ್ನಾಟಕದ ಮಾಜಿ ಸಚಿವ ಜನಾರ್ಸನ ರೆಡ್ಡಿ ಮತ್ತು ಅವರ ಭಾವ ಶ್ರಿನಿವಾಸ ರೆಡ್ಡಿ ಅವರು ಇನ್ನೂ ಒಂದು ವಾರ ಕಾಲ ಜೈಲಿನಲ್ಲಿ ಇರಬೇಕಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.