ADVERTISEMENT

ಸೇನಾಧಿಕಾರಿ ಅಮಿತ್ ಗುಪ್ತಾ ಬಂಧನ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ಭೋಪಾಲ (ಪಿಟಿಐ): ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿ ಅಂಜಲಿ ಗುಪ್ತಾ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರೂಪ್ ಕ್ಯಾಪ್ಟನ್ ಅಮಿತ್ ಗುಪ್ತಾ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

`ಅಮಿತ್ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆ ಸೆಕ್ಷೆನ್ 306 ಅಡಿ (ಆತ್ಮಹತ್ಯೆಗೆ ಕುಮ್ಮಕ್ಕು) ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಶೀಘ್ರ ನ್ಯಾಯಾಲಯದ ಎದುರು ಹಾಜರು ಪಡಿಸಲಾಗುವುದು~ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಚಾಂಡೇಲ್ ತಿಳಿಸಿದ್ದಾರೆ.

ಸೆಪ್ಟೆಂಬರ್ 11ರಂದು ಅಂಜಲಿ ಗುಪ್ತಾ ಅವರು ಅಮಿತ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಅಂಜಲಿ ಗುಪ್ತಾ ಅವರ ಶವದ ಮರಣೋತ್ತರ ಪರೀಕ್ಷೆಯ ವರದಿ ಮಂಗಳವಾರ ಬಂದಿದ್ದು, ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

`ಅಂಜಲಿ 2001ರಿಂದ ಅಮಿತ್ ಜತೆ ಒಟ್ಟಿಗೆ ವಾಸವಿದ್ದಳು. ಅಂಜಲಿಯೊಂದಿಗೆ ಮದುವೆಯಾಗುವುದಾಗಿ ಅಮಿತ್ ಭರವಸೆ ನೀಡಿದ್ದ. ಆದರೆ, ಹೇಳಿದಂತೆ ನಡೆದುಕೊಳ್ಳಲಿಲ್ಲ ಎಂಬ ಸಂಗತಿಯನ್ನು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ~ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಅಂಜಲಿ ಗುಪ್ತಾ ಅಂತ್ಯಸಂಸ್ಕಾರ ಇಲ್ಲಿನ ಸುಭಾಷ ನಗರದ ರುದ್ರಭೂಮಿಯಲ್ಲಿ ಸೋಮವಾರ ನೆರವೇರಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.