
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಲೆಫ್ಟಿನೆಂಟ್ ಜನರಲ್ ತೇಜೀಂದರ್ ಸಿಂಗ್ ಅವರು ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸೇನಾ ಅಧಿಕಾರಿಗಳಿಗೆ ವಿಚಾರಣಾ ನ್ಯಾಯಾಲಯ ಕಳುಹಿಸಿದ ಸಮನ್ಸ್ ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥ ಎಸ್.ಕೆ. ಸಿಂಗ್ ಸೇರಿದಂತೆ ಮೂವರೂ ಸೇನಾ ಅಧಿಕಾರಿಗಳಿಗೆ ಜುಲೈ 20ರಂದು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.