ನವದೆಹಲಿ (ಐಎಎನ್ಎಸ್): ಲೆಫ್ಟಿನೆಂಟ್ ಜನರಲ್ ಬಿಕ್ರಮ್ ಸಿಂಗ್ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾ ಮಾಡಿತು.
ಹಾಲಿ ಸೇನಾ ದಂಡನಾಯಕ ಜನರಲ್ ವಿ.ಕೆ. ಸಿಂಗ್ ಅವರು 2012ರ ಮೇ 31ರಂದು ನಿವೃತ್ತರಾಗಲಿದ್ದು, ಅವರ ಉತ್ತರಾಧಿಕಾರಿಯಾಗಿ ಲೆಫ್ಟಿನೆಂಟ್ ಜನರಲ್ ಬಿಕ್ರಮ್ ಸಿಂಗ್ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿಗಳಾದ ಆರ್.ಎಂ.ಲೋಧಾ ಮತ್ತು ನ್ಯಾಯಮೂರ್ತಿ ಎಚ್. ಎಲ್ ಗೋಖಲೆ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠವು ಅಡ್ಮಿರಲ್ ರಾಮದಾಸ್ ಮತ್ತು ಇತರ ಆರು ಮಂದಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ~ಸಂವಿಧಾನದ 32ನೇ ವಿಧಿ ಅನ್ವಯ ಕ್ರಮ ಕೈಗೊಳ್ಳಲು ಯಾವುದೇ ನ್ಯಾಯೋಚಿತ ಕಾರಣ ನಮಗೆ ಸಿಕ್ಕಿಲ್ಲ. ಆದ್ದರಿಂದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ~ ಎಂದು ಹೇಳಿತು.
ಅರ್ಜಿಯನ್ನು ವಜಾ ಮಾಡುವ ಮುನ್ನ ನ್ಯಾಯಾಲಯವು ಮುಂದಿನ ಸೇನಾ ದಂಡನಾಯಕರಾಗಿ ಲೆಫ್ಟಿನೆಂಟ್ ಜನರಲ್ ಬಿಕ್ರಮ್ ಸಿಂಗ್ ಅವರನ್ನು ನೇಮಕ ಮಾಡಿದ್ದಕ್ಕೆ ಸಂಬಂಧಿಸಿದ ಮೂಲದಾಖಲೆಗಳನ್ನು ನ್ಯಾಯಾಲಯಕ್ಕೆ ತರಿಸಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.