ADVERTISEMENT

ಸೇನಾ ವೈದ್ಯ ಜ್ಯೋತಿನ್ ಸಿಂಗ್‌ಗೆ ಅಶೋಕ ಚಕ್ರ

​ಪ್ರಜಾವಾಣಿ ವಾರ್ತೆ
Published 23 ಜನವರಿ 2011, 19:30 IST
Last Updated 23 ಜನವರಿ 2011, 19:30 IST

ನವದೆಹಲಿ (ಪಿಟಿಐ):  ಸೇನೆಯ ವೈದ್ಯರೊಬ್ಬರಿಗೆ ಇದೇ ಮೊದಲ ಬಾರಿಗೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಲಾಗುತ್ತಿದೆ. ಈ ಮೂಲಕ ಸೇನೆಯಲ್ಲಿ ವೈದ್ಯರ ಸೇವೆಯನ್ನು ದೊಡ್ಡದಾಗಿ ಸ್ಮರಿಸುವ ಕಾರ್ಯ ನಡೆದಿದೆ.

ಕಾಬೂಲ್‌ನಲ್ಲಿ ಭಾರತೀಯರ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಶೌರ್ಯ ಮೆರೆದ ಮೇಜರ್ ಲೈಶ್ರಮ್ ಜ್ಯೋತಿನ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ದಿನದಂದು ಈ ಪ್ರಶಸ್ತಿ ನೀಡಲಾಗುತ್ತಿದೆ. ಜ್ಯೋತಿನ್ ಸಿಂಗ್ ಪರವಾಗಿ ಯಾರು ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎನ್ನುವುದು ಸೇನೆಯ ಅಧಿಕಾರಿಗಳಿಗೆ ತಿಳಿದಿಲ್ಲ. ಸಿಂಗ್ ಅವರ ತಂದೆ ಅನಾರೋಗ್ಯ ಪೀಡಿತರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರೆ, ಅವರನ್ನು ನೋಡಿಕೊಳ್ಳುತ್ತಿರುವ ಸಹೋದರನಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಕಷ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.