ADVERTISEMENT

ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 11:44 IST
Last Updated 28 ಅಕ್ಟೋಬರ್ 2017, 11:44 IST
ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ
ಸೋನಿಯಾ ಗಾಂಧಿ ಗುಣಮುಖ: ಆಸ್ಪತ್ರೆಯಿಂದ ಮನೆಗೆ   

ನವದೆಹಲಿ: ಅನಾರೋಗ್ಯದ ಕಾರಣ ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದಾರೆ.

ಸೋನಿಯಾ ಗಾಂಧಿ ಅವರು ಹೊಟ್ಟೆ ನೋವಿನಿಂದ ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗುಣಮುಖರಾಗಿರುವ ಸೋನಿಯಾ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.