ADVERTISEMENT

ಸೋನಿಯಾ ಮತ್ತೆ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2016, 19:30 IST
Last Updated 18 ಆಗಸ್ಟ್ 2016, 19:30 IST
ಸೋನಿಯಾ ಮತ್ತೆ ಆಸ್ಪತ್ರೆಗೆ ದಾಖಲು
ಸೋನಿಯಾ ಮತ್ತೆ ಆಸ್ಪತ್ರೆಗೆ ದಾಖಲು   

ನವದೆಹಲಿ (ಪಿಟಿಐ): ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ಮತ್ತೆ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಸೋನಿಯಾಗಾಂಧಿ ಅವರು ಜ್ವರ, ಭುಜದ ನೋವಿಗೆ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ವೈದ್ಯರು ನೀಡಿದ ಸೂಚನೆಯಂತೆ ಆರೋಗ್ಯ ತಪಾಸಣೆಗಾಗಿ ಬುಧವಾರ ಸಂಜೆ ಸೋನಿಯಾಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಇನ್ನೂ ಕೆಲವು ದಿನ ಗಳ ಕಾಲ ಅವರು ಆಸ್ಪತ್ರೆಯಲ್ಲಿ ಉಳಿ ಯ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಸೋನಿಯಾ ಗಾಂಧಿ ಅವರ ಆರೋಗ್ಯ ಸುಧಾರಿಸುತ್ತಿದೆ. ಸಣ್ಣ ಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಪಿಜಿಯೋಥೆರೆಪಿಗೆ ಒಳಗಾಗಿದ್ದಾರೆ’ ಎಂದು ಆಸ್ಪತ್ರೆಯ ಉಪಾಧ್ಯಕ್ಷ ಡಾ. ಎಸ್‌.ಪಿ. ಬ್ಯೋತ್ರಾ ತಿಳಿಸಿದ್ದಾರೆ.

ಭುಜದ ನೋವಿಗಾಗಿ ನಡೆದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಹಾಕಿದ್ದ ಹೊಲಿಗೆ ಬಿಚ್ಚಿಸುವ ಸಲುವಾಗಿಯೂ ಸೋನಿಯಾ ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.