ADVERTISEMENT

‘ಸೋಲನ್ನು ಗಂಭೀರವಾಗಿ ಪರಿಗಣಿಸುತ್ತೇವೆ’

ಪಿಟಿಐ
Published 17 ಮಾರ್ಚ್ 2018, 19:30 IST
Last Updated 17 ಮಾರ್ಚ್ 2018, 19:30 IST
‘ಸೋಲನ್ನು ಗಂಭೀರವಾಗಿ ಪರಿಗಣಿಸುತ್ತೇವೆ’
‘ಸೋಲನ್ನು ಗಂಭೀರವಾಗಿ ಪರಿಗಣಿಸುತ್ತೇವೆ’   

ನವದೆಹಲಿ: ಉತ್ತರ ಪ್ರದೇಶ ಉಪಚುನಾವಣೆಯಲ್ಲಿನ ಸೋಲನ್ನು ‘ಗಂಭೀರವಾಗಿ’ ಪರಿಗಣಿಸಲಾಗಿದೆ. ಆದರೆ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗುತ್ತಿರುವುದು ತಮ್ಮ ಪಕ್ಷದ ಪ್ರಭಾವ ಹೆಚ್ಚುತ್ತಿರುವುದರ ಸಂಕೇತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಗೋರಖಪುರ ಹಾಗೂ ಫೂಲ್‌ಪುರ ಕ್ಷೇತ್ರಗಳಲ್ಲಿನ ಸೋಲಿನ ಕುರಿತು ಶಾ ಇದೇ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಈಗಾಗಲೇ ಬೆಳವಣಿಗೆ ಸಾಧಿಸಿದೆ. ಇಲ್ಲದಿದ್ದರೆ ಸಮಾಜವಾದಿ ಪಕ್ಷ, ಬಿಎಸ್‌ಪಿ ಹಾಗೂ ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸುತ್ತಿರಲಿಲ್ಲ’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.