ADVERTISEMENT

ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಏಜೆನ್ಸೀಸ್
Published 24 ಮೇ 2018, 9:21 IST
Last Updated 24 ಮೇ 2018, 9:21 IST
ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ   

ಚೆನ್ನೈ: ತೂತ್ತುಕುಡಿಯಲ್ಲಿರುವ ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕವನ್ನು ತಕ್ಷಣ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ  ಆದೇಶ ಹೊರಡಿಸಿದೆ.

ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಬುಧವಾರ ಈ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಅದರಂತೆ ಗುರುವಾರ ಬೆಳಗ್ಗ 5.15ಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಮೇ 18, 19ರಂದು ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಲಿನಕಾರಕ ಅಂಶಗಳು ಪತ್ತೆಯಾಗಿದ್ದರಿಂದ ಘಟಕವನ್ನು ಮುಚ್ಚುವಂತೆ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದರು.

ADVERTISEMENT

ಸ್ಟೆರಲೈಟ್‌ ತಾಮ್ರ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಗೋಲಿಬಾರ್‌ಗೆ 12 ಜನರು ಬಲಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.