ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ- ಬಿಎಸ್‌ಪಿ ಸ್ಪರ್ಧೆ ಇಲ್ಲ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2012, 19:30 IST
Last Updated 11 ಮಾರ್ಚ್ 2012, 19:30 IST

ಲಖನೌ(ಪಿಟಿಐ): ಉತ್ತರ ಪ್ರದೇಶದಲ್ಲಿ `ಗೂಂಡಾರಾಜ್ಯ~ದ ಮರುಸ್ಥಾಪನೆ ಆಗಿರುವುದರಿಂದ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ  ಬಿಎಸ್‌ಪಿ ಸ್ಪರ್ಧಿಸುವುದಿಲ್ಲ ಎಂದು  ಮಾಜಿ ಮುಖ್ಯಮಂತ್ರಿ ಮಾಯಾವತಿ ತಿಳಿಸಿದ್ದಾರೆ.

 ಅಪರಾಧ ಹಿನ್ನೆಲೆಯನ್ನು  ಹೊಂದಿರುವ ಸಮಾಜವಾದಿ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ  ಸ್ಥಳೀಯ ಸಂಸ್ಥೆ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲಾರವು ಎಂಬ ಆತಂಕ ಇರುವುದರಿಂದ ಬಿಎಸ್‌ಪಿ ಸ್ಪರ್ಧಿಸುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.

ರಾಷ್ಟ್ರೀಯ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, `ಚುನಾವಣೆ ಸಂದರ್ದಲ್ಲಿ  ಹಿಂಸಾಚಾರ ನಡೆಯುವ ಸಾಧ್ಯತೆಗಳಿರುವುದರಿಂದ ಉತ್ತರ ಪ್ರದೇಶದಲ್ಲಿ ಮುಂಬರುವ ಚುನಾವಣೆಗಳು ಕೇಂದ್ರ ಚುನಾವಣಾ ಆಯೋಗ ಅಥವಾ ಕೇಂದ್ರ ಸರ್ಕಾರಿ ಪಡೆಗಳ ಸುಪರ್ದಿಯಲ್ಲಿ ನಡೆಯುವುದು ಸೂಕ್ತ~ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.