ADVERTISEMENT

ಸ್ಥಾಯಿ ಸಮಿತಿ ಮುಂದೆ ಆರ್‌ಟಿಐ ಮಸೂದೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ನವದೆಹಲಿ (ಪಿಟಿಐ): ಅಚ್ಚರಿಯ ಬೆಳವಣಿಗೆಯಲ್ಲಿ ಸರ್ಕಾರವು,  ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ ಹೊರಗಿಡುವ ಮಸೂದೆಯನ್ನು ಗುರುವಾರ ಸಂಸದೀಯ ಸ್ಥಾಯಿ ಸಮಿತಿ ಮುಂದಿಟ್ಟಿದೆ.

ಸಿಬ್ಬಂದಿ ಖಾತೆ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಅವರು ಕಳೆದ ತಿಂಗಳು ಲೋಕಸಭೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದರು.

ವಿಸ್ತೃತ ಸಮಾಲೋಚನೆಗಾಗಿ ಈ ಮಸೂದೆಯನ್ನು ಕಾನೂನು ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ಸಂಸದೀಯ  ಸ್ಥಾಯಿ ಸಮಿತಿ ಮುಂದಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.