ADVERTISEMENT

ಸ್ಫೋಟಕ್ಕೂ ಮೋದಿ ಭಾಷಣಕ್ಕೂ ತಳಕು

ದಿಗ್ವಿಜಯ ಸಿಂಗ್ ಹೊಸ ವಿವಾದ

​ಪ್ರಜಾವಾಣಿ ವಾರ್ತೆ
Published 8 ಜುಲೈ 2013, 19:59 IST
Last Updated 8 ಜುಲೈ 2013, 19:59 IST

ನವದೆಹಲಿ(ಪಿಟಿಐ): ಬಿಹಾರದ ಬುದ್ಧಗಯಾದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪಾಠ ಕಲಿಸಬೇಕು ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಹೇಳಿರುವುದು ಹಾಗೂ ಅಯೋಧ್ಯೆಗೆ ಅಮಿತ್ ಷಾ ಭೇಟಿ ನೀಡಿರುವುದಕ್ಕೂ ಸಂಬಂಧವಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

`ಗುಜರಾತ್ ಬಿಜೆಪಿ ಉಸ್ತುವಾರಿ ಹಾಗೂ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಅಯೋಧ್ಯೆಗೆ ಭೇಟಿ ನೀಡಿ ರಾಮಮಂದಿರ  ನಿರ್ಮಾಣ ಮಾಡುವು ದಾಗಿ ಹೇಳಿದ ಹಾಗೂ ಬಿಹಾರದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವರಿಗೆ ಪಾಠ ಕಲಿಸಬೇಕು ಎಂದು ಹೇಳಿದ ಮರುದಿನವೇ ಸ್ಫೋಟ ಸಂಭವಿಸಿದೆ. ಇದರಲ್ಲೇನಾದರೂ ಒಂದಕ್ಕೊಂದು ಸಂಬಂಧವಿದೆಯೇ, ನನಗೆ ಗೊತ್ತಿಲ್ಲ' ಎಂದು ತಮ್ಮ ಟ್ವಿಟರ್‌ನಲ್ಲಿ ಸಿಂಗ್ ಹೇಳಿದ್ದಾರೆ.

ದಿಗ್ವಿಜಯ್ ಹೇಳಿಕೆಗೆ ಪ್ರತಿಕ್ರಿಯಿ ಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಸಿಂಗ್ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರು ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.