ಇಂಫಾಲ (ಐಎಎನ್‌ಎಸ್): ಮಣಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ವಿಧಾನಸಭಾ ಸ್ಪೀಕರ್ ಅವರ ನಿವಾಸದ ಹೊರಗೆ ಭಾನುವಾರ ಸಂಜೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಐ.ಹೇಮಚಂದ್ರ ಸಿಂಗ್ ಅವರ ಮನೆ ಹೊರಗೆ ಸಂಜೆ 6.15ರ ಸುಮಾರಿಗೆ ಈ ಘಟನೆ ನಡೆದಿದೆ. ಇದೊಂದು ಸುಧಾರಿತ ಸ್ಫೋಟಕ ಸಾಧನವಾಗಿತ್ತು ಎಂದು ಆರಂಭಿಕ ವರದಿಗಳು ಹೇಳಿವೆ. ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಸ್ಫೋಟ ಇದಾಗಿದೆ.
ಇದೇ ತಿಂಗಳ 6ರಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿತ್ತು. 10ರಂದು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಕೆ.ಜೋಯ್ ಕಿಶನ್ ಅವರ ಮನೆ ಹೊರಗೆ ಉಗ್ರರು ಗ್ರೆನೇಡ್ ಸ್ಫೋಟಿಸಿದ ಪರಿಣಾಮ ಮೂವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.