
ಪ್ರಜಾವಾಣಿ ವಾರ್ತೆಔರಿಯಾ, ಉತ್ತರಪ್ರದೇಶ (ಪಿಟಿಐ): ದೀಪಾವಳಿ ಹಬ್ಬಕ್ಕೆಂದು ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿ ಒಂದೇ ಕುಟುಂಬದ ಆರು ಜನರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟು, ಇತರ 12 ಜನರು ಗಾಯಗೊಂಡ ದಾರುಣ ಘಟನೆ ಮಂಗಳವಾರ ನಡೆದಿದೆ.
ಬೇಲಾ ಪೊಲೀಸ್ ಠಾಣಾ ವ್ಯಾಪ್ತಿಯ ಯಕೂಬ್‌ಪುರ ಪಟ್ಟಣದಲ್ಲಿನ ಮನೆಯೊಂದರಲ್ಲಿ ಈ ಅನಾಹುತ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.