ADVERTISEMENT

ಸ್ವ ನಾಮನಿರ್ದೇಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 18:05 IST
Last Updated 17 ಜೂನ್ 2018, 18:05 IST

ನವದೆಹಲಿ: 2017ನೇ ವರ್ಷದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗಳಿಗೆ ಶಿಕ್ಷಕರು ಸ್ವತಃ ನಾಮನಿರ್ದೇಶನ ಮಾಡಿಕೊಳ್ಳಲು ಅವಕಾಶ ಒದಗಿಸಲಾಗಿದೆ.

2017–18ನೇ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ನಾಲ್ಕು ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವವರೂ ತಮ್ಮ ಹೆಸರನ್ನು ಪ್ರಶಸ್ತಿಗೆ ಪರಿಗಣಿಸಲು ಕಳುಹಿಸಬಹುದು.

ಸ್ವ–ನಾಮನಿರ್ದೇಶನಕ್ಕೆ ಈ ವರ್ಷದಿಂದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಅವಕಾಶ ನೀಡಿದೆ. ಪ್ರಶಸ್ತಿ ನೀಡಿಕೆಯಲ್ಲಿ ಪಾರದರ್ಶಕತೆ ತರಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ನಾಮನಿರ್ದೇಶನದ ವ್ಯವಸ್ಥೆ ಜಾರಿಗೆ ತರಲಾಗಿದೆ. ಪ್ರಶಸ್ತಿಗಾಗಿಯೇ ಪ್ರತ್ಯೇಕ ಜಾಲತಾಣವನ್ನು ರೂಪಿಸಲಾಗಿದೆ.

ADVERTISEMENT

ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಸಿಐಎಸ್‌ಸಿಇ ಸೇರಿ ವಿವಿಧ ಮಂಡಳಿಗಳಿಂದ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಪ್ರಶಸ್ತಿಗೆ ಹೆಸರು ಕಳುಹಿಸಲು ಜೂನ್‌ 30 ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.