ಚಂಡಿಗಢ (ಪಿಟಿಐ) ಹರಿಯಾಣದಲ್ಲಿ ಕಾಂಗ್ರೆಸ್ ದೂಳೀಪಟವಾಗಿದ್ದು ಬಿಜೆಪಿ 49 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ.
2009ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 4 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಭಾರಿಯ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ.
ಆಡಳಿತರೂಢ ಕಾಂಗ್ರೆಸ್ ಪಕ್ಷ ದೂಳೀಪಟವಾಗಿದ್ದು 14 ಸ್ಥಾನಗಳನ್ನು ಗೆಲುವಲ್ಲಿ ಮಾತ್ರ ಯಶಸ್ವಿಯಾಗಿದೆ. ಪ್ರಾದೇಶಿಕ ಪಕ್ಷ ಐಎನ್‌ಎಲ್‌ಡಿ 21 ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲಿದೆ.
ಬಿಜೆಪಿ, ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಉಂಟಾಗಿತ್ತು. ಪ್ರಧಾನಿ ಮೋದಿ ಅವರ ಮ್ಯಾಜಿಕ್ ಮಂತ್ರ ಸಂಪೂರ್ಣವಾಗಿ ಕೆಲಸ ಮಾಡಿದ್ದು ಬಿಜೆಪಿ ಅಧಿಕಾರ ಹಿಡಿಯುವುದು ನಿಚ್ಚಳವಾಗಿದೆ. ಇತರರು 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹರಿಯಾಣದ ನಿರ್ಗಮಿತ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ.
ಪಕ್ಷಗಳ ಬಲಾಬಲ
| ಪಕ್ಷ | ಪಡೆದ ಸ್ಥಾನಗಳು |
| ಬಿಜೆಪಿ | 49 |
| ಕಾಂಗ್ರೆಸ್ | 14 |
| ಐಎನ್‌ಎಲ್‌ಡಿ | 21 |
| ಎಚ್‌ಜೆಸಿ | 02 |
| ಇತರರು | 04 |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.