
ಪಿಟಿಐಜಮ್ಮು: ಪೂಂಚ್ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ, ಉಪಠಾಣೆ ಹಾಗೂ ಹಳ್ಳಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ಶನಿವಾರ ಭಾರೀ ಪ್ರಮಾಣದ ಶೆಲ್ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 7.40ರ ಸುಮಾರಿಗೆ ಮಾನ್‌ಕೋಟ್ ವಲಯದ ಗಡಿಯಲ್ಲಿ ದಾಳಿ ಆರಂಭಿಸಿತು. ಭಾರತದ ಸೇನೆ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ದಾಳಿ ನಡೆಸುತ್ತಿದ್ದು, ಈ ವರ್ಷ ಜನವರಿಯಿಂದ ಈಚೆಗೆ 12 ಯೋಧರು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.