ADVERTISEMENT

‘ಹವಾಮಾನ ಮುನ್ಸೂಚನೆ ಜತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನೂ ಸೂಚಿಸಿ’

ಏಜೆನ್ಸೀಸ್
Published 22 ಮೇ 2018, 10:19 IST
Last Updated 22 ಮೇ 2018, 10:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹವಾಮಾನ ಮುನ್ಸೂಚನೆ ಜತೆಗೆ ಅನಾಹುತದಿಂದ ಪಾರಾಗಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಸೂಚನೆಯನ್ನೂ ನೀಡುವಂತೆ ಹವಾಮಾನ ಇಲಾಖೆಗೆ ಪ್ರಧಾನಿ ಕಾರ್ಯಾಲಯ ಸಲಹೆ ನೀಡಿದೆ.

ಇತ್ತೀಚೆಗೆ ಉತ್ತರ ಭಾರತದ ಏಳು ರಾಜ್ಯಗಳಲ್ಲಿ ಬಿರುಗಾಳಿ ಮತ್ತು ಮಳೆಯಿಂದ 200ಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಪ್ರಕೃತಿ ವಿಕೋಪದಿಂದ ಸಂಭವಿಸುವ ಸಾವಿನ ಬಗ್ಗೆ ಪ್ರಧಾನಿಯವರು ಕಳವಳ ವ್ಯಕ್ತಪಡಿಸಿದ್ದು, ತೆಗೆದುಕೊಳ್ಳಬಹುದಾದ ಕ್ರಮಗಳ ಪಟ್ಟಿಯನ್ನು ಹವಾಮಾನ ಇಲಾಖೆ ನೀಡುವಂತೆ ಸೂಚಿಸಿದ್ದಾರೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್ ಹೇಳಿದ್ದಾರೆ.

ಇಲಾಖೆ ಹಾಗೂ ಸಚಿವಾಲಯದ ಅಧಿಕಾರಿಗಳು ಇತ್ತೀಚೆಗೆ ಮಳೆಯಿಂದುಂಟಾದ ಅನಾಹುತಗಳ ಬಗ್ಗೆ ಪ್ರಧಾನಿ ಅವರಿಗೆ ಮಾಹಿತಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.