ADVERTISEMENT

ಹವಾಮಾನ ವೈಪರೀತ್ಯ: ಒಗ್ಗೂಡಿ ಹೋರಾಡಬೇಕು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ವದೆಹಲಿ (ಪಿಟಿಐ): `ಅಭಿವೃದ್ಧಿಶೀಲ ದೇಶಗಳ ಆರ್ಥಿಕತೆಯು ಹವಾಮಾನ ವೈಪರೀತ್ಯದ ಪ್ರಭಾವಕ್ಕೆ ಒಳಗಾಗಿದ್ದು, ಈ ನಿಟ್ಟಿನಲ್ಲಿ ದೀರ್ಘಕಾಲೀನ ಸವಾಲುಗಳನ್ನು ಎದುರಿಸಲು ಏಷ್ಯಾ ಮತ್ತು ಆಫ್ರಿಕನ್ ದೇಶಗಳ ನಡುವಣ ಬಾಂಧವ್ಯ ವೃದ್ಧಿಸಬೇಕಿದೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

`ಆಫ್ರಿಕಾ ಮತ್ತು ಏಷ್ಯಾ ಗ್ರಾಮೀಣ ಅಭಿವೃದ್ಧಿಯ ಸಂಘಟನೆ~ಯ ಸುವರ್ಣ ಮಹೋತ್ಸವ  ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, `ಆರ್ಥಿಕತೆಯ ದೃಷ್ಟಿಯಿಂದ ಭವಿಷ್ಯದಲ್ಲಿ ನಾವು ಹವಾಮಾನಕ್ಕೆ ಸಂಬಂಧಿಸಿದಂತೆ ದೀರ್ಘ ಹಾಗೂ ತಾತ್ಕಾಲಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂಬುದು ನನ್ನ ನಂಬಿಕೆಯಾಗಿದೆ~ ಎಂದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.