ADVERTISEMENT

ಹಿಜ್ಬುಲ್ ಮುಖ್ಯಸ್ಥನ ಮಗನ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 19:30 IST
Last Updated 14 ಮಾರ್ಚ್ 2018, 19:30 IST

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ಪ್ರಕರಣ ಸಂಬಂಧ ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾವುದೀನ್‌ನ ಹಿರಿಮಗನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬುಧವಾರ ವಿಚಾರಣೆಗೆ ಒಳಪಡಿಸಿತು.

ಶ್ರೀನಗರದ ವೈದ್ಯಕೀಯ ಸಂಸ್ಥೆಯಲ್ಲಿ ವೈದ್ಯಕೀಯ ಸಹಾಯಕ ವೃತ್ತಿ ಮಾಡುತ್ತಿರುವ ಶಕೀಲ್ ಹಾಗೂ ಇತರ ಐವರು ವಿಚಾರಣೆಗೆ ಹಾಜರಾಗಿದ್ದರು. ಇವರಿಗೆ ಸಲಾವುದೀನ್‌ನಿಂದ ಹಣ ಪೂರೈಕೆಯಾಗಿದೆ ಎಂಬ ಆರೋಪವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT