ADVERTISEMENT

ಹೆಚ್ಚುವರಿ ಗೃಹ ಕಾರ್ಯದರ್ಶಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:30 IST
Last Updated 5 ಡಿಸೆಂಬರ್ 2013, 19:30 IST

ಡೆಹ್ರಾಡೂನ್‌(ಪಿಟಿಐ): ಕೆಲಸ ಕೊಡಿಸುವ ನೆಪದಲ್ಲಿ 29 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇರೆಗೆ ಉತ್ತರಾಖಂಡ ಹೆಚ್ಚುವರಿ ಗೃಹ ಕಾರ್ಯದರ್ಶಿ ಜೆ.ಪಿ. ಜೋಶಿ ಅವರನ್ನು ಅಮಾನತು ಮಾಡಲಾಗಿದೆ.

ಜೋಶಿ ಅಮಾನತಿಗೆ ಮುಖ್ಯಮಂತ್ರಿ ವಿಜಯ್‌ ಬಹುಗುಣ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಜೋಶಿ ಅವರು ಪ್ರವಾಸೋದ್ಯಮ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೂರವಾಣಿ ಕರೆ ಮಾಡಿ ನನ್ನನ್ನು ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ’ ಎಂದು ಮಹಿಳೆಯು ನ.25ರಂದು ನೀಡಿದ ದೂರಿನಲ್ಲಿ ಜೋಶಿ ವಿರುದ್ಧ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.