ADVERTISEMENT

ಹೆಡ್ಲಿ ಹಸ್ತಾಂತರ ಕೋರಿ ಹಿಲರಿಗೆ ಪತ್ರ- ಖುರ್ಷಿದ್

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2012, 20:44 IST
Last Updated 1 ಡಿಸೆಂಬರ್ 2012, 20:44 IST

ನವದೆಹಲಿ (ಪಿಟಿಐ): ಪಾಕಿಸ್ತಾನ ಮೂಲದ ಅಮೆರಿಕದ ಲಷ್ಕರ್-ಎ-ತೈಯಬಾ ಸಂಘಟನೆಯ ಭಯೋತ್ಪಾದಕ ಡೆವಿಡ್ ಹೆಡ್ಲಿ ಮತ್ತು ಆತನ ಸಹಚರ ತವ್ವರ್ ಹುಸ್ಸೇನ್ ರಾಣಾನನ್ನು ಹಸ್ತಾಂತರಿಸಬೇಕು ಎಂದು ಕೋರಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರು ಅಮೆರಿಕ ವಿದೇಶಾಂಗ ಸಚಿವೆ ಹಿಲರಿಮ ಕ್ಲಿಂಟನ್ ಅವರಿಗೆ ಪತ್ರ ಬರೆದಿದ್ದಾರೆ.

ಜನವರಿಯಲ್ಲಿ ಈ ಇಬ್ಬರು ಭಯೋತ್ಪಾದಕರಿಗೆ ಶಿಕ್ಷೆ ವಿಧಿಸುವ ಮೊದಲು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.

ನವೆಂಬರ್ ಮೊದಲ ವಾರದಲ್ಲಿ ಖುರ್ಷಿದ್ ಅವರು ಪತ್ರ ಬರೆದಿದ್ದು, ಅಮೆರಿಕ ಸರ್ಕಾರವು ಭಾರತದ ಕೋರಿಕೆಯನ್ನು ಮಾನ್ಯ ಮಾಡಬಹುದು ಎಂಬ ಭರವಸೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.