ADVERTISEMENT

ಹೆಲಿಕಾಪ್ಟರ್ ಹಗರಣ: ಬಾಕಿ ಹಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ನವದೆಹಲಿ (ಪಿಟಿಐ):  ಅತಿ ಗಣ್ಯರ ಹೆಲಿಕಾಪ್ಟರ್ ಖರೀದಿಗೆ ಹಗರಣಕ್ಕೆ ಸಂಬಂಧಿಸಿದಂತೆ ರೂ 3600 ಕೋಟಿ ವಹಿವಾಟಿನ ಹೆಲಿಕಾಪ್ಟರ್ ಖರೀದಿ ಕೈತಪ್ಪು ಭೀತಿಯಲ್ಲಿರುವ ಇಟಲಿ ಮೂಲದ ಆಗಸ್ಟಾ ವೆಸ್ಟ್‌ಲ್ಯಾಂಡ್ ಕಂಪೆನಿ, ತಮ್ಮ ಸಂಸ್ಥೆಗೆ ಬರಬೇಕಾಗಿರುವ ಹಣವನ್ನು ಬಿಡುಗಡೆ ಮಾಡುವಂತೆ ಭಾರತ ಸರ್ಕಾರವನ್ನು ಕೇಳಿದೆ.

ಈ ಕುರಿತು ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿರುವ ಆಗಸ್ಟಾ ವೆಸ್ಟ್‌ಲ್ಯಾಂಡ್ ಕಂಪೆನಿ, `ಹೆಲಿಕಾಪ್ಟರ್ ಖರೀದಿಯಲ್ಲಿ ರಕ್ಷಣಾ ಸಚಿವಾಲಯದೊಂದಿಗೆ ಒಪ್ಪಂದದಲ್ಲಿ ಬಿಕ್ಕಟ್ಟು ಏರ್ಪಟ್ಟಿದ್ದು, ಈ ಸಂಬಂಧ ತಮ್ಮ ಕಂಪೆನಿಗೆ ಸೇರಬೇಕಾದ ಹಣವನ್ನು ಬಿಡುಗಡೆ ಮಾಡುಬೇಕು' ಎಂದು ಕೇಳಿದೆ.

ಗಣ್ಯರ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಶೇ 30ರಷ್ಟು ಹಣವನ್ನು ಬಿಡುಗಡೆ ಮಾಡಿದೆ. ಆದರೆ ಈ ವ್ಯವಹಾರದಲ್ಲಿ ಫಿನ್ ಮೆಕ್ಕಾನಿಕಾ ಮತ್ತು ಆಗಸ್ಟಾ ಕಂಪೆನಿಗಳ ಮಾಜಿ ಸಿಇಒಗಳು ರೂ.362 ಕೋಟಿ ಲಂಚ ಪಡೆದಿದ್ದನ್ನು ಇಟಲಿಯ ತನಿಖಾಧಿಕಾರಿಗಳು ಪತ್ತೆ ಹಚ್ಚಿದ ಮೇಲೆ ಬಾಕಿ ಹಣವನ್ನು ತಡೆ ಹಿಡಿಯಲಾಗಿತ್ತು.

ಆದರೆ ಈ ಪ್ರಕರಣದಲ್ಲಿ ಯಾರ ವಿರುದ್ಧವೂ ಆರೋಪ ಸಾಬೀತಾಗಿಲ್ಲ. ಎರಡೂ ದೇಶಗಳಲ್ಲಿ ತನಿಖೆ ಇನ್ನೂ ಮುಂದುವರಿದಿದೆ.
ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಐಎಎಫ್ ಮುಖ್ಯಸ್ಥ ಎಸ್.ಪಿ.ತ್ಯಾಗಿ ಮತ್ತು ಅವರ ಮೂವರು ಸಂಬಂಧಿಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.