ಹೈದರಾಬಾದ್ (ಪಿಟಿಐ): ಕಳೆದ ಫೆಬ್ರುವರಿಯಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿಂತೆ ಇಂಡಿಯನ್ ಮುಜಾಹಿದೀನ್ ಸಂಘಟನೆಯ ಯಾಸೀನ್ ಭಟ್ಕಳ ಮತ್ತು ಅಸಾದುಲ್ಲಾ ಅಖ್ತರ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.
ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ಸಂಭವಿಸಿದ ಅವಳಿ ಸ್ಫೋಟದಲ್ಲಿ 18 ಅಮಾಯಕರು ಮೃತಪಟ್ಟು, 131 ಜನರು ಗಾಯಗೊಂಡಿದ್ದರು.
‘ಈ ವಿಧ್ವಂಸಕ ಕೃತ್ಯಗಳಿಗೆ ನೆರೆ ರಾಷ್ಟ್ರಗಳಿಂದ ಆರ್ಥಿಕ ನೆರವು ಹರಿದು ಬಂದಿರುವುದು ದೃಢಪಟ್ಟಿದೆ. ಬಾಂಬ್ ಸ್ಫೋಟದಂತಹ ವಿಧ್ವಂಸಕ ಕೃತ್ಯಗಳಿಂದ ಇಂಡಿಯನ್ ಮುಜಾಹಿದೀನ್, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ಜನರಲ್ಲಿ ಭಯವನ್ನು ಹುಟ್ಟಿಸುವ ಪ್ರಯತ್ನದ ಭಾಗವಾಗಿ ಹೈದರಾಬಾದ್‌ನಲ್ಲಿ ಅವಳಿ ಸ್ಫೋಟದ ಸಂಚು ರೂಪಿಸಿತ್ತು’ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.