ಬಾಲಾಸೋರ್ (ಒಡಿಶಾ) (ಪಿಟಿಐ): ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, ಮೂರು ಸಾವಿರ ಕಿ.ಮೀ. ದೂರದವರೆಗೆ ಭೂಮಿಯಿಂದ ಭೂಮಿಗೆ ಚಿಮ್ಮಬಲ್ಲ ‘ಅಗ್ನಿ–3’ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆಯು ಇಲ್ಲಿ ಸೋಮವಾರ ಯಶಸ್ವಿಯಾಗಿ ನಡೆದಿದೆ.
‘ದೇಶಿ ತಂತ್ರಜ್ಞಾನದಿಂದ ನಿರ್ಮಿಸಲಾದ ಈ ಕ್ಷಿಪಣಿ ಪ್ರಯೋಗಾರ್ಥ ಪರೀಕ್ಷೆಯನ್ನು ಕಾರ್ಯತಂತ್ರ ಪಡೆ ಕಮಾಂಡ್ (ಎಸ್ಎಫ್ಸಿ) ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ವಕ್ತಾರ ರವಿ ಕುಮಾರ್ ಗುಪ್ತಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.