ನವದೆಹಲಿ (ಪಿಟಿಐ): ಮುಂಬರುವ ಲೋಕಸಭೆ ಚುನಾವಣೆಗಾಗಿ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಉದ್ದೇಶದಿಂದಲೇ ರಾಜೀನಾಮೆ ನೀಡಿದ್ಧಾಗಿ ಜಯಂತಿ ನಟರಾಜನ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಯೋಜನೆಗಳಿಗೆ ಪರಿಸರ ಅನುಮತಿ ತಡೆಹಿಡಿದಿದ್ದ ಪರಿಸರ ಸಚಿವಾಲಯದ ಬಗ್ಗೆ ಉದ್ಯಮ ವಲಯದಿಂದ ದೂರುಗಳು ಇದ್ದವು. ಈ ಕಾರಣಕ್ಕಾಗಿ ಜಯಂತಿ ಅವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂಬುದನ್ನು ಅವರು ಅಲ್ಲಗಳೆದಿದ್ದಾರೆ.
ಯಾವುದೇ ಯೋಜನೆಗಳನ್ನು ತಡೆಹಿಡಿದಿರಲಿಲ್ಲ. ಪಕ್ಷ ಸಂಘಟನೆ ಉದ್ದೇಶದಿಂದಲೇ ರಾಜೀನಾಮೆ ನೀಡಿದ್ದೇನೆ. ನನ್ನ ಕೆಲಸಗಳನ್ನು ಪ್ರಧಾನ ಮಂತ್ರಿ ಮೆಚ್ಚಿಕೊಂಡಿದ್ದಾರೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.