ಲಖನೌ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿಯವರ ‘ಚಮಚಾ’ಗಳು ಎಂದು ಅರವಿಂದ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.
ಕಾನ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶದಲ್ಲಿ ‘ಮೋದಿ ಅಲೆ’ ಇದೆ ಎಂಬುದನ್ನು ನಿರಾಕರಿಸಿದ ಅವರು ಅದು ‘ಹಣ ನೀಡಿರುವ ಟಿವಿ ವಾಹಿನಿಗಳ ಸಮೀಕ್ಷೆಗಳಿಗೆ’ ಸೀಮಿತವಾಗಿದೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಹೇಳಿದರು.
ಬಿಜೆಪಿ ಸೋನಿಯ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ಅವರೊಡನೆ ಒಳ ಒಪ್ಪಂದ ಮಾಡಿಕೊಂಡಿರುವಂತಿದೆ, ಹಾಗಾಗಿ ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜಸ್ತಾನದಲ್ಲಿ ವಾದ್ರ ಅವರ ಭೂಹಗರಣ ಕುರಿತು ಯಾವುದೇ ತನಿಖೆ ನಡೆಸಿಲ್ಲ ಎಂದು ಆರೋಪಿಸಿದರು. ಕಾನ್ಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.