ನವದೆಹಲಿ (ಪಿಟಿಐ): ದೆಹಲಿಯಲ್ಲಿ ಹೊಸ ಸರ್ಕಾರ ರಚನೆ ಮಾಡುವ ಕುರಿತು ಸೋಮವಾರ ಮುಂಜಾನೆ ವೇಳೆಗೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.
ಸರ್ಕಾರ ರಚಿಸಲು ಆಮ್ ಆದ್ಮಿ ಪಕ್ಷಕ್ಕೆ ಸೂಚನೆ ದೊರೆತಿರುವ ಬಗ್ಗೆ ವರದಿಗಾರರ ಪ್ರಶ್ನೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಬಹುಶಃ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಿಗ್ಗೆ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ಸರ್ಕಾರ ರಚನೆ ಸಂಬಂಧ ಪಕ್ಷವು ಸಾರ್ವಜನಿಕರೊಂದಿಗೆ ಇನ್ನೂ ಹೆಚ್ಚಿನ ಸಭೆ ನಡೆಸಬೇಕಿದೆ. ಸರ್ಕಾರ ರಚನೆಯ ಪ್ರತಿಯೊಂದು ಹಂತದಲ್ಲೂ ಸಾರ್ವಜನಿಕರ ಆಯ್ಕೆಯನ್ನು ಪರಿಗಣಿಸಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.